ಚಿಕ್ಕಮಗಳೂರು : ರಾಜಕೀಯಕ್ಕೆ ಬಂದ ಸಂದರ್ಭದಿಂದಲೂ ನಾನು ಒಬ್ಬಂಟಿ. ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ ಎಂದು ಈಶ್ವರಪ್ಪ ಅವರಿಗೆ ಸಿಟಿ ರವಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತು ಪಕ್ಷದ ಕಟ್ಟಾ ಕಾರ್ಯಕರ್ತ. ೧೯೮೮-೯೯ರಲ್ಲಿ ಬಿಜೆಪಿಯನ್ನು ಆರಿಸಿಕೊಂಡಾಗ ನನ್ನ ಮನೆ ಹಾಗೂ ನನ್ನ ಊರಿನಲ್ಲು ನಾನು ಒಬ್ಬಂಟಿಯಾಗಿದ್ದೆ. ಒಂದೊಂದೆ ಮೆಟ್ಟಿಲು ಹತ್ತುತ್ತಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗೆ ಬಂದಿದ್ದೇನೆ ಎಂದು ತಿಳಿಸಿದರು.
ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ. ಪಕ್ಷವನ್ನು ಬಲ ಪಡಿಸುವುದು ನನ್ನ ಕೆಲಸ. ಅದನ್ನು ಮಾಡುತ್ತಾ ಬಂದಿದ್ದೇನೆ. ವೈಯಕ್ತಿಕ ಹಿತಾಸಕ್ತಿಯನ್ನು ಮೀರಿದ ಚುನಾವಣೆ ಇದು, ಕೇವಲ ರಾಷ್ಟ್ರೀಯ ಹಿತಾಶಕ್ತಿಯನ್ನು ಮಾತ್ರ ಚಿಂತೆ ಮಾಡಬೇಕಿದೆ ಎಂದರು.
ಮೋದಿ ಮತ್ತೊಮ್ಮೆ ಎಂಬ ಒಂದೇ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತೇವೆ ಎಂದರು.
ಯಡಿಯೂರಪ್ಪ ಹಾಗೂ ಈಶ್ವರಪ್ಪ ಹಿರಿಯರು ಮತ್ತು ಹಿಂದಿನಿಂದಲೂ ಒಳ್ಳೆಯ ಸ್ನೇಹಿತರು. ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಬಿಸಿನೆಸ್ ಪಾರ್ಟ್‌ನರ್ಸ್ ಆಗಿದ್ದರು ಎಂದು ಕೇಳಿದ್ದೇನೆ. ಅವರಿಬ್ಬರ ಮಧ್ಯೆ ಏನೇ ಸಮಸ್ಯೆ ಇದ್ದರೂ ಯಡಿಯೂರಪ್ಪ ಅವರು ಸರಿಪಡಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು, ಈ ಹಾಡನ್ನು…
ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರು ಇದೀಗ ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಗೂ ಕಾಲಿಟ್ಟಿದೆ. ಈಗಾಗಲೇ ‘ಕೆಜಿಎಫ್’, ‘ಸಲಾರ್’…
ಮುಂಬೈ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತ್ವತ್ವದ ಸರ್ಕಾರ ಕಾಂಗ್ರೆಸ್‌ನ ಎಟಿಎಂ ಆಗಿದೆ ಎಂದು ಪ್ರಧಾನಿ ನರೇಂದ್ರ ವಾಗ್ದಾಳಿ…
ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ಕ್ಷೇತ್ರದ ಪ್ರಚಾರ ವೇಳೆ ಚನ್ನಪಟ್ಟಣಕ್ಕೆ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಕೊಡುಗೆ…
ಮಡಿಕೇರಿ: ರಾತ್ರೋರಾತ್ರಿ ಈ ಭಾಗದ ಜನತೆಯ ಜಮೀನು ವಕ್ಫ್ ಆಸ್ತಿವೆಂದು ಸೃಷ್ಠಿಯಾಗುತ್ತಿದೆ. ಹೀಗಾಗಿ ನಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ…
ಬಳ್ಳಾರಿ: ತಾನು ಮುಖ್ಯಮಂತ್ರಿಯಾಗಿದ್ದ ವೇಳೆ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ರೂಪಿಸಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಗೆ ಹಣ ನೀಡಲಾಗದೇ ಆ ಯೋಜನೆಯನ್ನೂ…