ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.
ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ ಜೊತೆಗೆ ಪಕ್ಷವನ್ನು ಬೆಳೆಸುವ ಬೆಳೆಸಿ, ವಿಸ್ತರಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಕೂಡ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಸಿಟಿ ರವಿ ಇದರು ಎಂಬ ಪ್ರಶ್ನೆಗೆ, ಎಲ್ಲವೂ ಬದಲಾಗುತ್ತಿರುತ್ತದೆ, ಬದಲಾಗದೇ ಇರುವುದು ಕಾರ್ಯಕರ್ತ ಸ್ಥಾನ, ನಾನು ಸಾಮಾನ್ಯ ಕಾರ್ಯಕರ್ತ ಎಂದು ಪ್ರತಿಕ್ರಿಯೆ ನೀಡಿದರು.
ನಾನು ಕಳೆದ 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ, ಮಾತನಾಡಲು ಬಹಳ ವಿಷಯವಿದೆ, ಈ ಮಾತನಾಡಿದರೇ ನನ್ನ ಮಾತೆ ನನಗೆ ತಿರುಗುಬಾಣವಾಗುತ್ತದೆ ಎಂದರು.
ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…
ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…
ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್ ನಂಬರ್ 21ರ…
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…