Mysore
20
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ 

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಸಮನ್ಸ್‌ ವಿಚಾರವಾಗಿ ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚು ಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್‌ಶೀಟ್‌ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್‌ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್.‌19ರೊಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ನಮ್ಮ ಕಾಂಗ್ರೆಸ್‌ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್‌ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕರು ಸಹಾಯ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

Tags:
error: Content is protected !!