Mysore
34
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಾನೇ: ಎಚ್.ಡಿ.ಕುಮಾರಸ್ವಾಮಿ

ದಾವಣಗೆರೆ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ.

ಚುನಾವಣೆ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ. ಏನೇ ಆಗಲಿ ಅಭ್ಯರ್ಥಿ ನಾನೇ ಎಂದು ಘೋಷಣೆ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಮುಂದೆ ಇದು ಯಾವ ಹಂತಕ್ಕೆ ಬಂದು ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ.

 

Tags:
error: Content is protected !!