g parameshwara opinion about janivara
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತೊಮ್ಮೆ ಅಕಾಡ ಪ್ರವೇಶಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ ಕುರಿತಾಗಲಿ ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಸಾಧ್ಯವಿಲ್ಲ. ಹೆಚ್ಚೆಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಬಹುದು. ಉಳಿದಂತೆ ಹೈಕಮಾಂಡ್ ನಾಯಕರು ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಯಾರಾದರೂ ನನ್ನ ಹೆಸರನ್ನು ಕೂಗಿದ ತಕ್ಷಣ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹಾಗೆ ಕೂಗುವುದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ನನ್ನ ಸಾಮಥ್ರ್ಯವನ್ನು ಎಷ್ಟು ಬಾರಿ ಸಾಬೀತುಪಡಿಸಬೇಕು. ಕೆಪಿಸಿಸಿ ಅಧ್ಯಕ್ಷನಾಗಿ ಎಂಟು ವರ್ಷ ಕೆಲಸ ಮಾಡಿದ್ದೇನೆ. ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಾಮಥ್ರ್ಯ ಇಲ್ಲದೆ ಇದ್ದರೆ ಉಪಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೆ. ನನ್ನ ಸಾಮರ್ಥ್ಯದ ಬಗ್ಗೆ ಯಾರು ಪ್ರಶ್ನೆ ಮಾಡುವಂತಿಲ್ಲ. ಹಲವಾರು ಬಾರಿ ನಾನು ಅದನ್ನು ಸಾಬೀತುಪಡಿಸಿದ್ದೇನೆ. ಆದರೆ ಸನ್ನಿವೇಶ ಮತ್ತು ಪಕ್ಷದ ತೀರ್ಮಾನ ಎಲ್ಲವನ್ನೂ ಆಧರಿಸಿರುತ್ತದೆ ಎಂದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…