Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಬಿಜೆಪಿ ವ್ಯವಸ್ಥೆಯಿಂದ ನಾನು ದೂರ: ಶಿವರಾಮ್‌ ಹೆಬ್ಬಾರ್‌

ಕಾರವಾರ: ಅಧಿಕಾರಕ್ಕಾಗಿ ಬಿಜೆಪಿಯಲ್ಲಿನ ಒಳಜಗಳ ಹಾಗೂ ಅಲ್ಲಿನ ವ್ಯವಸ್ಥೆಯಿಂದ ಬೇಸತ್ತು ನಾನು ದೂರ ಉಳಿದಿದ್ದೇನೆ ಎಂದು ಬಿಜೆಪಿ ರೆಬೆಲ್‌ ಶಾಸಕ ಶಿವರಾಮ್‌ ಹೆಬ್ಬಾರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ಸುದ್ದಿಗಾರರೊದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಷ್ಟು ಬಣ ಇದೆ ಎಂಬುದು ಗೊತ್ತಿಲ್ಲ. ನಾನು ಮತ್ತು ರಾಜಶೇಖರ್‌ ನಿರ್ಣಯ ತೆಗೆದುಕೊಂಡಾಗ ತಪ್ಪು ಎಂದ ರಾಜ್ಯ ಬಿಜೆಪಿ ನಾಯಕರೆಲ್ಲ ಈಗ ಅವರೇ ತಪ್ಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಕುರಿತು ಆಗುತ್ತಿರುವ ಬಣ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿ, ಸರಿಯಾದ ಸಮಯ ನೋಡಿ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ದೊರೆಯದ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿತ್ತು. ಈಗ ಎಲ್ಲ ಸರಿಯಾಗುತ್ತಿದೆ. ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಇಂತಹ ಯೋಜನೆಗಳ ಅನುಷ್ಠಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ ಬಿಜೆಪಿ ಮುಂಬೈ, ದೆಹಲಿಯಲ್ಲಿ ಏನು ಮಾಡಿತು ಎಂದು ಪ್ರಶ್ನೆ ಮಾಡಿದ್ದಾರೆ.

Tags:
error: Content is protected !!