ಕಾರವಾರ: ಅಧಿಕಾರಕ್ಕಾಗಿ ಬಿಜೆಪಿಯಲ್ಲಿನ ಒಳಜಗಳ ಹಾಗೂ ಅಲ್ಲಿನ ವ್ಯವಸ್ಥೆಯಿಂದ ಬೇಸತ್ತು ನಾನು ದೂರ ಉಳಿದಿದ್ದೇನೆ ಎಂದು ಬಿಜೆಪಿ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗಾರರೊದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಷ್ಟು ಬಣ ಇದೆ ಎಂಬುದು ಗೊತ್ತಿಲ್ಲ. ನಾನು ಮತ್ತು ರಾಜಶೇಖರ್ ನಿರ್ಣಯ ತೆಗೆದುಕೊಂಡಾಗ ತಪ್ಪು ಎಂದ ರಾಜ್ಯ ಬಿಜೆಪಿ ನಾಯಕರೆಲ್ಲ ಈಗ ಅವರೇ ತಪ್ಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಕುರಿತು ಆಗುತ್ತಿರುವ ಬಣ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿ, ಸರಿಯಾದ ಸಮಯ ನೋಡಿ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ದೊರೆಯದ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿತ್ತು. ಈಗ ಎಲ್ಲ ಸರಿಯಾಗುತ್ತಿದೆ. ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಇಂತಹ ಯೋಜನೆಗಳ ಅನುಷ್ಠಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.
ರಾಜ್ಯ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ ಬಿಜೆಪಿ ಮುಂಬೈ, ದೆಹಲಿಯಲ್ಲಿ ಏನು ಮಾಡಿತು ಎಂದು ಪ್ರಶ್ನೆ ಮಾಡಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…