dk shivkumar (2)
ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನನಗೆ ಮುಖ್ಯಮಂತ್ರಿ ಆಗೋಕೆ ಆತುರ ಇಲ್ಲ. ನನ್ನ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಸಿಎಂ ಆಗೋ ಟೈಂ ಹತ್ತಿರ ಬಂದಿದೆ ಎಂದು ಎಲ್ಲೂ ಕೂಡ ಹೇಳಿಲ್ಲ. ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡಲು ಹೊರಟಿದ್ದೇನೆ. ಜನರಿಗಾಗಿ ಒಳ್ಳೆಯ ಕೆಲಸ ಮಾಡುವುದೇ ನನ್ನ ಗುರಿ, ಜನರ ಸೇವೆ ಮಾಡಲು ಹಗಲು ರಾತ್ರಿ ಎನ್ನದೇ ತಿರುಗುತ್ತಿದ್ದೇನೆ ಎಂದರು.
ಇದನ್ನು ಓದಿ: ಡಿಕೆಶಿ ನವೆಂಬರ್‌ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್ ಆರ್ ಶಿವರಾಮೇಗೌಡ
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಬಳಿ ಬರುವ ಜನರೆಲ್ಲಾ ನೀವು ಸಿಎಂ ಆಗಬೇಕು ಅಂತಾರೆ. ಆದರೆ ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಕಾಂಗ್ರೆಸ್‌ನ ಹಲವಾರು ಶಾಸಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂದು ಪದೇ ಪದೇ ಬಹಿರಂಗ ಹೇಳಿಕೆ ಕೊಡುತ್ತಿರುವ ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…