ಚಿತ್ರದುರ್ಗ: ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಶ್ರೀರಾಮುಲು ನನಗಿಂತ ಹಿರಿಯರು. ಬಿಎಸ್‌ವೈ, ಅನಂತ ಕುಮಾರ್ ಹಾಗೂ ಕಾರಜೋಳ ಅವರ ಜೊತೆ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕಳೆದ ಒಂದೂವರೆ ವರ್ಷದಿಂದ ಯಶಸ್ವಿಯಾಗಿ ರಾಜ್ಯಾಧ್ಯಕ್ಷ ಹುದ್ದೆ ಜವಾಬ್ದಾರಿ ನಿರ್ವಹಿಸಿದ್ದೇನೆ. ಆದ್ದರಿಂದ ನನಗೆ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವಂತೆ ಕಾರ್ಯಕರ್ತರ ಅಪೇಕ್ಷೆ ಸಹ ಇದೆ ಎಂದು ಹೇಳಿದರು.





