Mysore
20
broken clouds

Social Media

ಶನಿವಾರ, 25 ಜುಲೈ 2026
Light
Dark

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ವಿಚಾರದ ಕುರಿತು ಸಚಿವ ಜಾರ್ಜ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಅವರು, ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ಅದು ಸತ್ಯಕ್ಕೆ ದೂರ. ನನ್ನ ಸಂಪೂರ್ಣ ಬೆಂಬಲ ಸಿಎಂ ಸಿದ್ದರಾಮಯ್ಯಗೆ ಇದೆ. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

Tags:
error: Content is protected !!