Mysore
22
overcast clouds
Light
Dark

ಈಶ್ವರಪ್ಪ ಮಗನಿಗೆ ಟಿಕೆಟ್‌ ತಪ್ಪಲು ನಾನು ಕಾರಣನಲ್ಲ : ಯಡೀಯೂರಪ್ಪ

ನವದೆಹಲಿ : ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅನಗತ್ಯವಾಗಿ ತಪ್ಪು ತಿಳಿದಿದ್ದಾರೆ. ಅವರ ಮಗನಿಗೆ ಟಿಕೆಟ್‌ ಕೈತಪ್ಪಲು ನಾನು ಕಾರಣ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ನಿರ್ಧಾರ ನನ್ನದಲ್ಲ ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಯಾವುದೇ ತೀರ್ಮಾನ ನನ್ನದಲ್ಲ. ಎಲ್ಲವೂ ಕೇಂದ್ರ ವರಿಷ್ಠರು ಹಾಗೂ ರಾಜ್ಯದ ಎಲ್ಲಾ ನಾಯಕರನು ಸೇರಿ ಕೈಗೊಳ್ಳುತ್ತಾರೆ ಎಂದರು.

ಬಿ.ವೈ.ವಿಜಯೇಂದ್ರ ಭವಿಷ್ಯ ಜನ ತೀರ್ಮಾನ ಮಾಡ್ತಾರೆ : ಲೋಕಸಭಾ ಚುನಾವಣೆ ನಂತರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸ್ಥಿತಿ ಬರುತ್ತದೆ ಎಂದು ಹೇಳದ್ದ ಈಶ್ವರಪ್ಪ ಮಾತಿಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಈಶ್ವರಪ್ಪ ತಮ್ಮ ಪುತ್ರನಿಗೆ ಟಿಕೆಟ್‌ ಕೈತಪ್ಪಲು ನಾನು ಮತ್ತು ವಿಜಯೇಂದ್ರ ಕಾರಣ ಎಂದು ತಿಳಿದಿದ್ದಾರೆ. ಹೀಗಾಗಿ ಇಂತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಪಕ್ಷದ ಸಂಘಟನೆಯಲ್ಲಿ ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇರಬೇಕೆ ಬೇಡವೇ ಎಂದು ಜನ ತೀರ್ಮಾನ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.