Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಈಶ್ವರಪ್ಪ ಪುತ್ರನಿಗೆ ಟಿಕೆಟ್‌ ತಪ್ಪಲು ನಾನು ಕಾರಣ ಅಲ್ಲ : ಯಡಿಯೂರಪ್ಪ !

ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು.

ರಾಜ್ಯ ನಾಯಕರು ಈಶ್ವರಪ್ಪನವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಳಿನ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ.

ಅವರನ್ನು ಮತ್ತೆ ಕರೆತರುವ ಪ್ರಯತ್ನವನ್ನು ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನವಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ.

ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Tags:
error: Content is protected !!