ರಾಜ್ಯ

ನಾನು ಯೂಟರ್ನ್‌ ಹೊಡೆಯುವ ಗಿರಾಕಿಯಲ್ಲ; ಮಂಡ್ಯದಿಂದ ಸ್ಪರ್ಧಿಸುವ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ವಿರುದ್ಧ ಸೋಲನುಭವಿಸಿದ್ದ ನಿಖಿಲ್‌ ಕುಮಾರಸ್ವಾಮಿ ಹೆಸರೂ ಸಹ ಈ ಕುರಿತಾಗಿ ಕೇಳಿಬರುತ್ತಿದ್ದು, ಸದ್ಯ ಸ್ವತಃ ನಿಖಿಲ್‌ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ನಾನು ಯೂಟರ್ನ್‌ ಹೊಡೆಯುವ ಗಿರಾಕಿಯಲ್ಲ. ನನ್ನ ಉದ್ದೇಶದ ಬಗ್ಗೆ ನನಗೆ ಸ್ಪಷ್ಟನೆ ಇದೆ. ವರ್ಷದ ಹಿಂದೆ ಈ ಕುರಿತು ಕೇಳಿದ್ದಾಗಲೂ ಸಹ ನಾನು ಇದೇ ಮಾತನ್ನು ಹೇಳಿದ್ದೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ನಾನಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು ( ಫೆಬ್ರವರಿ 11 ) ಮಾತನಾಡಿದ ಅವರು ಕಳೆದ ಕೆಲ ದಿನಗಳಿಂದ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಜೆಡಿಎಸ್‌ – ಬಿಜೆಪಿ ಮೈತ್ರಿಕೂಟದಿಂದ ನಾನು ನಿಲ್ಲುತ್ತಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವಲ್ಲ, ಕಳೆದ 25 ದಿನಗಳಿಂದ ಹಳೆ ಮೈಸೂರು ಭಾಗದ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟ ಎಲ್ಲಾ ತಾಲೂಕುಗಳ ಮುಖಂಡರು, ಅಭ್ಯರ್ಥಿಗಳ ಹಾಗೂ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ವರಿಷ್ಠರ ಗಮನಕ್ಕೆ ತರುವ ಜವಾಬ್ದಾರಿಯನ್ನು ಪಕ್ಷ ನನಗೆ ವಹಿಸಿದೆ. ಈ ನಿಟ್ಟಿನಲ್ಲಿ ಮಂಡ್ಯದ ಹಲವು ತಾಲೂಕುಗಳಿಗೆ ಹೋಗಿ ಕೆಲಸ ಆರಂಭಿಸಿದ್ದೇನೆ ಎಂದರು.

2019ರ ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದೆ. ಈ ಬಾರಿ ಚುನಾವಣೆ ಪ್ರಕ್ರಿಯೆಯಲ್ಲಿ ನೀವು ಬಂದು ಸಕ್ರಿಯರಾಗಿ ಭಾಗವಹಿಸಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಅವರ ಮಾತಿಗೆ ಬೆಲೆ ಕೊಟ್ಟು ಮಂಡ್ಯ ಮಾತ್ರವಲ್ಲದೇ ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಪ್ರಚಾರ ನಡೆಸುವ ಹಾಗೂ ಜನರ ಪ್ರೀತಿ ವಿಶ್ವಾಸ ಗಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನಿಖಿಲ್‌ ಹೇಳಿಕೊಂಡರು.

andolana

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

1 hour ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

1 hour ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

1 hour ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

1 hour ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

12 hours ago