Mysore
29
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ನಾನು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮುಡಾ ಹಗರಣದ ವಿರುದ್ಧ ನಾನು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೆ ಆಗ್ರಹಿಸಲ್ಲ ಎಂದು ಹೇಳಿದ್ದಾರೆ.

ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ತಪ್ಪು ಮಾಡಿದರೆ ನ್ಯಾಯಾಲಗಳು ಏನು ತೀರ್ಮಾನ ಮಾಡಬೇಕು ಅದನ್ನು ಮಾಡುತ್ತವೆ ಎಂದು ಹೇಳಿದ್ದಾರೆ.

Tags:
error: Content is protected !!