ರಾಜ್ಯ

ನಾನು ಸಾಲದ ರಾಮಯ್ಯ ಎಲ್ಲ, ಅನ್ನದ ರಾಮಯ್ಯ : ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.

ದಾವಣಗೆರೆಗೆ ಶಾಮನೂರು ಕೊಡುಗೆ ಸಾಕಷ್ಟಿದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದರು.

ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ ಎಂದರು.

ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ ಇದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023. ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದರು.

ಗ್ಯಾರಂಟಿಯಿಂದ ಖಜಾನೆ ಖಾಲಿ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಾವು 1.40 ಕೋಟಿ ರೂ ಸಾಲ ಮಾಡಿದ್ದೇವೆ. ಬಿಜೆಪಿಯವರು 5.30 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago