ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ಆಕಸ್ಮಿಕವಾಗಿ ಬದಲಾವಣೆ ಆದರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ನನ್ನ ಹೆಸರನ್ನು ಪ್ರಸ್ತಾವನೆ ಮಾಡಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನಮ್ಮ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿರುವುದಕ್ಕೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾವೆಲ್ಲಾ ಯಡಿಯೂರಪ್ಪ ಅವರಿಂದ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ ನನಗೆ ಅವಕಾಶಕೊಟ್ಟರೆ ರಾಜ್ಯದ 224 ಕ್ಷೇತ್ರಗಳಲ್ಲಿ ಸಂಘಟನೆ ಮಾಡಿ ಭಿನ್ನಾಭಿಪ್ರಾಯ ಶಮನ ಮಾಡುತ್ತೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಕೆಲಸ ಮಾಡುತ್ತೇನೆ. ನನಗೆ ಯಡಿಯೂರಪ್ಪ ಅವರ ಆಶೀರ್ವಾದ ಬೇಕಿದೆ. ಒಂದು ವೇಳೆ ಹೈಕಮಾಂಡ್ ಬದಲಾವಣೆ ಮಾಡಿದರೆ ನಾನು ಸಿದ್ಧನಿದ್ದೇನೆ ಎಂದರು.
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ…