Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಹೈಕಮಾಂಡ್‌ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ. ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಪಕ್ಷ ನನಗೆ ಅರ್ಹತೆ ಮೀರಿ ಅವಕಾಶ ಕೊಟ್ಟಿದೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದರು.

ಇನ್ನು ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ. ಆದರೆ ಕೆಲಸದಲ್ಲಿ ತೃಪ್ತಿ ಇಲ್ಲ ಎಂದರು. ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧನಿದ್ದೇನೆ. ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಅಚ್ಚರಿಕೆಯ ಹೇಳಿಕೆ ನೀಡಿದರು.

Tags:
error: Content is protected !!