Mysore
28
scattered clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ನಾನು ಯಾರಿಗೂ ವಕ್ತಾರನಲ್ಲ, ಕಾಂಗ್ರೆಸ್‌ ಪಕ್ಷದ ಪ್ರತಿನಿಧಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಾಂಗ್ರೆಸ್‌ ಮುಖಂಡರಿಂದ ರಾಜ್ಯಪಾಲರ ನಿಂದನೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ರಾಜ್ಯ ಸರ್ಕಾರದ ಸಚಿವರು, ಶಾಸಕರು ಸೇರಿದಂತೆ ಲಕ್ಷಾಂತರ ಜನತೆ ಸಿಎಂ ಸಿದ್ದರಾಮಯ್ಯ ಪರ ಇದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ವಿರುದ್ಧ ಕಿಡಿಕಾರಿದರು.

 

Tags:
error: Content is protected !!