ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಮುಖಂಡರಿಂದ ರಾಜ್ಯಪಾಲರ ನಿಂದನೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ರಾಜ್ಯ ಸರ್ಕಾರದ ಸಚಿವರು, ಶಾಸಕರು ಸೇರಿದಂತೆ ಲಕ್ಷಾಂತರ ಜನತೆ ಸಿಎಂ ಸಿದ್ದರಾಮಯ್ಯ ಪರ ಇದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಿಡಿಕಾರಿದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…