ರಾಜ್ಯ

ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ನಾನೆ: ಡಿಸಿಎಂ ಡಿಕೆ ಶಿವಕುಮಾರ್‌

ಚನ್ನಪಟ್ಟಣ: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚೆನ್ನಪಟ್ಟಣ ವಿಧನಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ನಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳು ಕೇಳಿದ ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.

ಚನ್ನಪಟ್ಟಣದಲ್ಲಿ ಕಳೆದ ಆರು ವರ್ಷಗಳಿಂದ ಧ್ವಜಾರೋಹಣ ನಡೆದಿಲ್ಲ ಎಂದು ಅಧಿಕಾರಿಗಳು ಬಂದು ಕೇಳಿದರು. ಅವರಿಗೆ ದೇಶಾಭಿಮಾನ ಇಲ್ಲ ಎಂದು ನನಗನಿಸುತ್ತದೆ. ಅವರು ಏನಾದರೂ ಮಾಡಲಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ ಎಂದು ಟಾಂಗ್‌ ಕೊಟ್ಟರು.

ಗ್ಯಾರೆಂಟಿ ವಿಚಾರಕ್ಕೆ ಸಂಬಂಧಿಸಿದಂತೆ ಗ್ಯಾರೆಂಟಿ ನಿಲ್ಲಿಸುವ ಬಗ್ಗೆ ಯಾವ ಸಚಿವರು ಮಾತನಾಡಿಲ್ಲ. ಅನುಕೂಲ ಇರುವವರಿಗೂ ಸೌಲಭ್ಯ ಸಿಗುತ್ತಿದ್ದು, ಅನುಕೂಲ ಇರುವವರಿಗೆ ಬೇಡ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಚಿಂತಿಸಿ ತೀರ್ಮಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಿಕೆ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

21 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

46 mins ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

57 mins ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

13 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

14 hours ago