Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ನಾನು ಈ ಭೂಮಿ ಮೇಲಿ ಅದೃಷ್ಟಶಾಲಿ ವ್ಯಕ್ತಿ: ಶಿಲ್ಪಿ ಅರುಣ್‌ ಯೋಗಿರಾಜ್‌ ಭಾವುಕ!

ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಭಾವುಕ ನುಡಿಗಳಾಗಿದೆ.

ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿತ್ತು. ಈ ದಿನ ನನ್ನ ಬದುಕಿನ ಅವಿಸ್ಮರಣೀಯ ದಿನವಾಗಿದೆ. ನನ್ನ ಪೂರ್ವಜರು, ಕುಟುಂಬಸ್ಥರು, ಭಗವಾನ್‌ ಶ್ರೀರಾಮಲಲ್ಲಾರ ಆಶೀರ್ವಾದ ನನ್ನ ಮೇಲಿದೆ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಸಂತಸ ಹಂಚಿಕೊಂಡಿದ್ದಾರೆ.

ಇಂದು (ಜನವರಿ 22) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ಸಮಯಾವಾಕಾಶ ತೆಗೆದುಕೊಂಡಿದ್ದರು.

ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಈ ವಿಗ್ರಹವನ್ನು ಕೆತ್ತಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!