ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಭಾವುಕ ನುಡಿಗಳಾಗಿದೆ.
ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿತ್ತು. ಈ ದಿನ ನನ್ನ ಬದುಕಿನ ಅವಿಸ್ಮರಣೀಯ ದಿನವಾಗಿದೆ. ನನ್ನ ಪೂರ್ವಜರು, ಕುಟುಂಬಸ್ಥರು, ಭಗವಾನ್ ಶ್ರೀರಾಮಲಲ್ಲಾರ ಆಶೀರ್ವಾದ ನನ್ನ ಮೇಲಿದೆ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಸಂತಸ ಹಂಚಿಕೊಂಡಿದ್ದಾರೆ.
ಇಂದು (ಜನವರಿ 22) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ಸಮಯಾವಾಕಾಶ ತೆಗೆದುಕೊಂಡಿದ್ದರು.
ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಈ ವಿಗ್ರಹವನ್ನು ಕೆತ್ತಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…