Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ನಾನು, ಸಿಎಂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಷನ್‌ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೋಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದು ಹೇಳಿದರು.

ನನ್ನ ಪರ, ವಿರುದ್ಧ ಶಾಸಕರು, ಸಚಿವರು ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್‌ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು.

ನನ್ನ ಪರ, ವಿರುದ್ಧ ಶಾಸಕರು ಹಾಗೂ ಸಚಿವರು ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್‌ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು.

Tags:
error: Content is protected !!