ಬೆಳಗಾವಿ : ಕಾರು ಮತ್ತು ಬೈಕ್ ನಡುವಿನ ಅಪಘಾತ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ವರ್ತನೆ ಬಗ್ಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಜನರ ಬಳಿ ಎಚ್‌ಡಿ ರೇವಣ್ಣ ಅವರು ಕ್ಷಮೆ ಕೋರಿದ್ದಾರೆ.
ಸುವರ್ಣಸೌಧದಲ್ಲಿ ಸೋಮವಾರ ಮಾತನಾಡಿ, ಪತ್ನಿ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ ಎಂದು ಎಚ್‌ಡಿ ರೇವಣ್ಣ ಹೇಳಿದ್ದಾರೆ.
” ಬೈಕ್ ಸವಾರ ಕುಡಿದು ಬೈಕ್ ಓಡಿಸಿದ್ದ. ನಾವೇನು ಅವರ ಬಳಿ ಡ್ಯಾಮೇಜ್ ಹಣ ಕೊಡಿ ಎಂದು ಕೇಳಲಿಲ್ಲ. ಏನಾದರೂ ಹೆಚ್ಚು ಕಮ್ಮಿ ಆಗಿದ್ರೆ ಯಾರು ಹೊಣೆ? ಈ ಸಂಬಂಧ ಬೇಕಾದರೆ ಭವಾನಿ ರೇವಣ್ಣ ಅವರಿಂದಲೂ ಕ್ಷಮೆ ಕೇಳಿಸುತ್ತೇನೆ. ಸಿಟ್ಟಾಗಿ ಭವಾನಿ ಮಾತನಾಡಿದ್ದಾರೆ ” ಎಂದರು.
ಬೈಕ್ ಅವನೇ ಬಂದು ಸೈಡ್ ನಿಂದ ಕಾರಿಗೆ ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಗಾಗುತ್ತಿತ್ತು? ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಅವರು ಸಿಟ್ಟನಲ್ಲಿ ಮಾತನಾಡಿದ್ದಾರೆ. ನಮ್ಮ ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಲ್ಲ. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್‌ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಎಂದು ಪ್ರಶ್ನಿಸಿದರು.
ದೊಡ್ಡ ವಿಚಾರ ಮಾಡಬೇಡಿ: ಘಟನೆ ನಡೆದ ಬಳಿಕ ಠಾಣೆಗೆ ತಿಳಿಸಬೇಕಲ್ಲವಾ? ಯಾರಿಗಾದರೂ ನೋವಾಗಿದ್ದರು ವಿಷಾದ ವ್ಯಕ್ತಪಡಿಸುತ್ತೇನೆ. ಅವರು ಕುಡಿದು ಬಂದು ಮುಂದೆನೇ ಗುದ್ದಿದ್ದಾರೆ. ಕಾರಿನಲ್ಲಿದ್ದವರ ಪ್ರಾಣಕ್ಕೆ ತೊಂದರೆ ಆಗಿದ್ದರೆ? ಎಷ್ಟೇ ನಿಧಾನವಾಗಿ ಹೋಗಿದ್ದರು ಬಂದು ಮಧ್ಯದಲ್ಲಿ ಗುದ್ದಿದ್ದಾನೆ. ಅದನ್ನು ದೊಡ್ಡ ವಿಚಾರ ಮಾಡಬೇಡಿ ಎಂದು ಮನವಿ ಮಾಡಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…