ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಹಲವು ಕಾಂಗ್ರೆಸ್ ಶಾಸಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ.
ಹೀಗಿರುವಾಗಲೇ ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನೂ ಕೂಡ ಸ್ಪರ್ಧೆ ಮಾಡುತ್ತೇನೆ. ಇದರಲ್ಲಿ ಜೂನಿಯರ್ ಹಾಗೂ ಸೀನಿಯರ್ ಎಂಬ ಪ್ರಶ್ನೆ ಬರಲ್ಲ. ಅಂತಹ ಪರಿಸ್ಥಿತಿ ಬಂದರೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧೆ ಮಾಡದೆ ಬಿಡಲ್ಲ ಎಂದು ಹೇಳಿದರು.
ಇನ್ನು ಹೈಕಮಾಂಡ್ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಸಿಎಂ ಆಗಿರಲಿ. ಬಹುಮತವಿರುವವರಿಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಒಂದು ವೇಳೆ ಸಿಎಂ ಬದಲಾವಣೆಯಾದರೆ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಪುನರುಚ್ಛರಿಸಿದರು.