ರಾಜ್ಯ

ನಾನು ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಹಲವು ಕಾಂಗ್ರೆಸ್‌ ಶಾಸಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ.

ಹೀಗಿರುವಾಗಲೇ ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನೂ ಕೂಡ ಸ್ಪರ್ಧೆ ಮಾಡುತ್ತೇನೆ. ಇದರಲ್ಲಿ ಜೂನಿಯರ್‌ ಹಾಗೂ ಸೀನಿಯರ್‌ ಎಂಬ ಪ್ರಶ್ನೆ ಬರಲ್ಲ. ಅಂತಹ ಪರಿಸ್ಥಿತಿ ಬಂದರೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧೆ ಮಾಡದೆ ಬಿಡಲ್ಲ ಎಂದು ಹೇಳಿದರು.

ಇನ್ನು ಹೈಕಮಾಂಡ್‌ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಸಿಎಂ ಆಗಿರಲಿ. ಬಹುಮತವಿರುವವರಿಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಒಂದು ವೇಳೆ ಸಿಎಂ ಬದಲಾವಣೆಯಾದರೆ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಪುನರುಚ್ಛರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

44 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

59 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

2 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago