ನವದೆಹಲಿ: ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್‌ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ ದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ.
ಈ ಸಭೆ ಪರಸ್ಪರ ಅಭಿನಂದಿಸುವ, ಶುಭಾಷಯ ಮಿನಿಮಯ ಮಾಡಿಕೊಳ್ಳುವ ಸಭೆಯಷ್ಟೆ, ಅಷ್ಟು ಬಿಟ್ಟರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಮೋದಿ ಅವರು ಹೇಳಿದ್ದಾರೆ. ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚೆಯಾಗಿಲ್ಲ ಜೊತೆಗೆ ನಾನು ಕೂಡ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದ ಅವರು, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಎಂದರು.
ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಲು ಒತ್ತಾಯ
ಅತ್ತ ದೆಹಲಿಯಲ್ಲಿ ಕೃಷಿ ಸಚಿವ ಸ್ಥಾನ ಕೇವಲ ಊಹಾಪೋಹ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಅವರ ಅಭಿಮಾನಿಗಳು ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಅಷ್ಟೆ ಅಲ್ಲದೇ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆದ್ದ ಡಾ.ಸಿ.ಎನ್ ಮಂಜುನಾಥ್ ಅವರಿಗೂ ಸಹ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…