ಬೆಂಗಳೂರು: ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಎಂದು ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೆಲ್ಲಿ ಆರ್‌ಎಸ್‌ಎಸ್ ನಿಷೇಧ ಮಾಡಬೇಕು ಎಂದು ಹೇಳಿದ್ದೇನೆ? ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘಟ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದಿದ್ದೇನೆ ಅಷ್ಟೇ. ಆರ್‌ಎಸ್‌ಎಸ್ ಸಂಘಟನೆಯನ್ನು ಈವರೆಗೂ ನೋಂದಣಿ ಮಾಡಿಲ್ಲ. ಸಂಘ ರಿಜಿಸ್ಟರ್ ಆಗಿದ್ದರೆ ಕಾಪಿ ಕೊಡಲಿ. ಅವರ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲು 55 ವರ್ಷ ಬೇಕಾಯಿತು ಎಂದು ಹೇಳಿದರು.
ಇದನ್ನು ಓದಿ: ಆರ್‌ಎಸ್‌ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ: ಆರ್.ಅಶೋಕ್
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ನಾಯಕರು ಯಾಕೆ ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಗಣೇಶ ವೇಷ ಹಾಕಿಸಿ ಕೈಯಲ್ಲಿ ದೊಣ್ಣೆ ಹಿಡಿಸುವುದಿಲ್ಲ? ಬಡವರ ಮಕ್ಕಳನ್ನು ಆರ್‌ಎಸ್‌ಎಸ್‌ಗೆ ಸೆಳೆದು ಬಡವರ ಮಕ್ಕಳಿಗೆ ವೇಷ ತೊಡಿಸಿ ಪ್ರಚೋದನಕಾರಿ ಭಾಷಣ ಮಾಡುವುದು ಯಾಕೆ? ಈ ಬಗ್ಗೆ ಮೊದಲು ಬಿಜೆಪಿ ನಾಯಕರು, ಆರ್‌ಎಸ್‌ಎಸ್‌ನವರು ಉತ್ತರ ನೀಡಲಿ ಎಂದು ಹೇಳಿದರು.
ಇನ್ನು ಶಾಸಕ ಮುನಿರತ್ನ ಗಣವೇಷ ಹಾಕಿಕೊಂಡು, ಗಾಂಧೀಜಿ ಫೋಟೋ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದು, ಹಾಸ್ಯಾಸ್ಪದ. ಅವರಿಗೆ ಆರ್‌ಎಸ್‌ಎಸ್ ಇತಿಹಾಸ ಗೊತ್ತಿಲ್ಲ ಅನ್ನಿಸುತ್ತೆ ಎಂದು ವ್ಯಂಗ್ಯವಾಡಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…