Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಂದ ಹಿರೇಬಾಗೆವಾಡಿ ಪೊಲೀಸರು ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಖಾನಾಪುರ ಠಾಣೆಯಲ್ಲಿ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಇದರ ವಿಡಿಯೊ ಚಿತ್ರೀಕರಣ ಕೂಡ ಮಾಡಿದರು.

ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದು ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.

ವಿಚಾರಣೆ ಮುಗಿಸಿದ ಹಿರೇಬಾಗೆವಾಡಿ ಇನ್‌ಸ್ಪೆಕ್ಟರ್‌ ಆರ್.ಆರ್‌ ಪಾಟೀಲ್‌ ಅವರು ಸಿ.ಟಿ ರವಿ ಅವರ ವೈದ್ಯಕ್ಯೀಯ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

Tags: