ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಿಡಿ ಕಾಡಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಎಂದು ನಾನೆಂದೂ ಒಪ್ಪೋದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ತಪ್ಪು ಮಾಡಿದವರಿಗೆ ಹಿರಿಯರು ಬೈದಿದ್ದಾರೆ. ಇಂತಿಂಥವರಜ ಇಂತಿಂಥ ಕೆಲಸ ಮಾಡಬೇಕು ಎಂದು ವರಿಷ್ಠರು ನಮಗೆ ಟಾಸ್ಕ್ ನೀಡಿದ್ದಾರೆ. ಟಾಸ್ಕ್‌ನಲ್ಲಿ ನಾನು ವಿಫಲವಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಹೇಳಿದ್ದೇನೆ. ಅಲ್ಲಿ ಏನೇನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒಬ್ಬ ಭ್ರಷ್ಟ, ಪಕ್ಷದಲ್ಲಿ ಅವನಿನ್ನೂ ಜೂನಿಯರ್, ಅವನಿಗೆ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂದೇ ವಿಜಯೇಂದ್ರನಿಗೆ ಲೇಬಲ್ ಇದೆ. ಮುಂದಿನ ಅಧ್ಯಕ್ಷ ಯಾರೆಂದು ಪಕ್ಷ ತೀರ್ಮಾನ ಮಾಡಬೇಕು. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೇನೂ ಯಡಿಯೂರಪ್ಪ ವಿರೋಧಿಯಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಅವರ ಬಗ್ಗೆ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…