ಧರ್ಮಸ್ಥಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ಹೊಳೆ ನರಸೀಪುರ ಶಾಸಕ ಎಚ್.ಡಿ ರೇವಣ್ಣ ಇಂದು (ಸೋಮವಾರ, ಮೇ.27) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಮಾರು ನಾಲ್ಕು ದಶಕಗಳಿಂದ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ಹೊಳೆ ನರಸೀಪುರ ಶಾಸಕನಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ತಮ್ಮ ಹಾಗೂ ಪುತ್ರ ಪ್ರಜ್ವಲ್ ಮೇಲಿನ ಆರೋಪದ ಕುರಿತು ಮಾತನಾಡಲು ನಿರಾಕರಿಸಿದ ರೇವಣ್ಣ, ಈ ನೆಲದ ಕಾನೂನಿನ ಮೇಲೆ ನನಗೆ ಅಪಾರ ಗೌರವ, ವಿಶ್ವಾಸ ಮತ್ತು ನಂಬಿಕೆಯಿದೆ ಎಂದು ತಿಳಿಸಿದರು.
ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣ ಹಂತದಲ್ಲಿರುವುದರಿಂದ ಈ ಬಗ್ಗೆ ಕಾಮೆಂಟ್ ಮಾಡುವುದು ಸರಿಯಲ್ಲ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ ಎಂದರು.
ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೆಗೌಡರು ಭಾರತಕ್ಕೆ ಹಿಂತಿರುಗಿ ಕಾನೂನಿನ ಮುಂದೆ ಶರಣಾಗುವಂತೆ ಪತ್ರ ಬರೆದಿದ್ದಾರೆ ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಯಾವುದೇ ಪ್ರತಿಕ್ರಿಯೆ ನೀಡದ ರೇವಣ್ಣ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತೆರಳಿದರು.
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…