ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರು ಪ್ರಜ್ವಲ್‌ಗೆ ಪತ್ರ ಬರದಿರುವ ಬಗ್ಗೆ ನನಗೆ ಗೊತ್ತಿಲ್ಲ: ಎಚ್‌.ಡಿ ರೇವಣ್ಣ

ಧರ್ಮಸ್ಥಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ಹೊಳೆ ನರಸೀಪುರ ಶಾಸಕ ಎಚ್‌.ಡಿ ರೇವಣ್ಣ ಇಂದು (ಸೋಮವಾರ, ಮೇ.27) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಮಾರು ನಾಲ್ಕು ದಶಕಗಳಿಂದ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ಹೊಳೆ ನರಸೀಪುರ ಶಾಸಕನಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ತಮ್ಮ ಹಾಗೂ ಪುತ್ರ ಪ್ರಜ್ವಲ್‌ ಮೇಲಿನ ಆರೋಪದ ಕುರಿತು ಮಾತನಾಡಲು ನಿರಾಕರಿಸಿದ ರೇವಣ್ಣ, ಈ ನೆಲದ ಕಾನೂನಿನ ಮೇಲೆ ನನಗೆ ಅಪಾರ ಗೌರವ, ವಿಶ್ವಾಸ ಮತ್ತು ನಂಬಿಕೆಯಿದೆ ಎಂದು ತಿಳಿಸಿದರು.

ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣ ಹಂತದಲ್ಲಿರುವುದರಿಂದ ಈ ಬಗ್ಗೆ ಕಾಮೆಂಟ್‌ ಮಾಡುವುದು ಸರಿಯಲ್ಲ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ ಎಂದರು.

ಇನ್ನು ಪ್ರಜ್ವಲ್‌ ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೆಗೌಡರು ಭಾರತಕ್ಕೆ ಹಿಂತಿರುಗಿ ಕಾನೂನಿನ ಮುಂದೆ ಶರಣಾಗುವಂತೆ ಪತ್ರ ಬರೆದಿದ್ದಾರೆ ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಯಾವುದೇ ಪ್ರತಿಕ್ರಿಯೆ ನೀಡದ ರೇವಣ್ಣ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತೆರಳಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

3 hours ago