ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಅವರನ್ನು ನೇಮಕ ಮಾಡಿದ್ದು ಬಿಎಸ್ ಯಡಿಯೂರಪ್ಪ ಅಲ್ಲ. ಪಿಎಂ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶಿಫಾರಸಿನ ಮೇರೆಗೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಪಕ್ಷದ ವರಿಷ್ಠರು ಮೊದಲ ಬಾರಿಗೆ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಸ್ವೀಕರಿಸಿದ ರೀತಿಯಲ್ಲಿ ಕರ್ನಾಟಕದಲ್ಲಿಯೂ ಪಕ್ಷದ ನಾಯಕರು ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬೆಂಬಲಿಸಬೇಕು. ಬಿ.ವೈ ವಿಜಯೇಂದ್ರ ಅವರ ನೇಮಕ ಬಗ್ಗೆ ಯಾವುದೇ ಟೀಕೆ ಮಾಡಬೇಡಿ, ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
ವಿಜಯೇಂದ್ರ ನೇಮಕದ ಬಗ್ಗೆ ಮತ್ತೊಬ್ಬ ಬಿಜೆಪಿ ನಾಯಕ ವಿ ಸೋಮಣ್ಣ ಕಿಡಿಕಾರಿದ್ದು, ಈ ವಿಷಯವನ್ನು ಪಕ್ಷದ ಹೈಕಮಾಂಡ್ ಬಗೆಹರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮುಖಂಡರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡ ಪಾಟೀಲ್, ರಾಜೀನಾಮೆ ಕೊಟ್ಟು, ಪಕ್ಷಕ್ಕೆ ಮುಜುಗರ ಆಗುವುದನ್ನು ನಿಲ್ಲಸಿ ಎಂದು ಸಲಹೆ ನೀಡಿದ್ದಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…