ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಅಂತಾರೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಗೊಂದಲ ಬಗೆಹರಿಸಿಕೊಳ್ಳಿ ಅಂತಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ನಿರ್ಧಾರ ಎನ್ನುತ್ತಾರೆ. ಇನ್ನು ರಾಹುಲ್‌ಗೆ ಟೈಮಿಲ್ಲ. ದೇಶ-ವಿರೋಧಿ ಕೆಲಸದಲ್ಲಿ ಬ್ಯುಸಿ ಎಂದು ವ್ಯಂಗ್ಯವಾಡಿದರು.





