ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಸ, ಸಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದಷ್ಟೇ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಇನ್ನು ವಿಜಯಪುರದಲ್ಲಿಂದು ಮಾತನಾಡಿದ್ದ ಬಿಜೆಪಿ ಶಾಸಕರ ಯತ್ನಾಳ್ ಅವರು, ಬಿಜೆಪಿ ಜೊತೆಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ ಮಾಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಚರ್ಚೆಯನ್ನೂ ನಡೆಸಿದ್ದಾರೆ. ಒಟ್ಟು 60ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆತರಲಿದ್ದಾರೆ. ಇದರ ಮುಂದುವರಿದ ಭಾಗವೇ ನಮಸ್ತೇ ಸದಾ ವತ್ಸಲೇ ಹಾಡುತ್ತೇವೆ ಎಂದು ಹೇಳಿದ್ದಾರೆ ಎಂದಿದ್ದರು.





