ರಾಜ್ಯ

ಕಸ, ಸಗಣಿ ಮೇಲೆ ಕಲ್ಲು ಹಾಕಲು ಇಷ್ಟವಿಲ್ಲ: ಯತ್ನಾಳ್‌ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಸ, ಸಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದಷ್ಟೇ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಇನ್ನು ವಿಜಯಪುರದಲ್ಲಿಂದು ಮಾತನಾಡಿದ್ದ ಬಿಜೆಪಿ ಶಾಸಕರ ಯತ್ನಾಳ್‌ ಅವರು, ಬಿಜೆಪಿ ಜೊತೆಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಚರ್ಚೆ ಮಾಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಚರ್ಚೆಯನ್ನೂ ನಡೆಸಿದ್ದಾರೆ. ಒಟ್ಟು 60ರಿಂದ 70 ಕಾಂಗ್ರೆಸ್‌ ಶಾಸಕರನ್ನು ಕರೆತರಲಿದ್ದಾರೆ. ಇದರ ಮುಂದುವರಿದ ಭಾಗವೇ ನಮಸ್ತೇ ಸದಾ ವತ್ಸಲೇ ಹಾಡುತ್ತೇವೆ ಎಂದು ಹೇಳಿದ್ದಾರೆ ಎಂದಿದ್ದರು.

ಆಂದೋಲನ ಡೆಸ್ಕ್

Recent Posts

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

7 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

41 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

1 hour ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago