Mysore
18
scattered clouds

Social Media

ಶನಿವಾರ, 31 ಜನವರಿ 2026
Light
Dark

ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಕಾಂಗ್ರೆಸ್ಸಿಗ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ಮೊದಲು ಅವರ ಪಕ್ಷವನ್ನು ಅವರು ಸರಿ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ನಾನು ಕಾಂಗ್ರೆಸ್‍ನ ವ್ಯಕ್ತಿ. ಪಕ್ಷ ನನ್ನ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತದೆ. ಸಂಕಷ್ಟದ ಸಮಯದಲ್ಲಿ ನನ್ನ ಜೊತೆಗೆ ಪಕ್ಷ ಇತ್ತು. ಈಗಲೂ ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನು ಓದಿ: 1ನೇ ತರಗತಿಯಿಂದಲೇ ಕಂಪ್ಯೂಟರ್‌ ಶಿಕ್ಷಣ ಆರಂಭ: ಸಚಿವ ಮಧು ಬಂಗಾರಪ್ಪ

ಇಂದು ಸಂವಿಧಾನದ ದಿನಾಚರಣೆ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ತಾವು ಮತ್ತೆ ದೆಹಲಿಗೆ ತೆರಳುತ್ತಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು.

ರಾಜ್ಯ ರಾಜಕೀಯದ ಊಹಾಪೋಹಗಳ ಬಗ್ಗೆ ಚರ್ಚೆ ಮಾಡಲು ನಾನು ಬಯಸುವುದಿಲ್ಲ. ಯಾವ ಶಾಸಕರ ಜೊತೆಗೂ ನಾನು ಮಾತನಾಡಿಲ್ಲ, ನನ್ನ ಪರವಾಗಿ ಮಾತನಾಡಿ ಎಂದು ಕೂಡ ಕೇಳಿಲ್ಲ. ನನಗೆ ಪಕ್ಷ ಮುಖ್ಯ. ನನಗಾಗಿ ನನ್ನ ಹೈಕಮಾಂಡ್ ಇದೆ. ಸೂಕ್ತ ಸಮಯದಲ್ಲಿ ಸಮರ್ಪಕ ನಿರ್ಧಾರ ತೆಗೆದುಕೊಳ್ಳುತ್ತದೆ. ಇಲ್ಲಿ ನಾನು ಮುಖ್ಯಮಂತ್ರಿಯಾಗುವುದು ಮುಖ್ಯ ಅಲ್ಲ. ಶಾಸಕರು ನನ್ನ ಪರವಾಗಿ ಮಾತನಾಡುವುದು ಬೇಡ ಎಂದು ಹೇಳಿದರು.

Tags:
error: Content is protected !!