ಬೆಂಗಳೂರು: ನಾನು ಕಾಂಗ್ರೆಸ್ಸಿಗ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ಮೊದಲು ಅವರ ಪಕ್ಷವನ್ನು ಅವರು ಸರಿ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ನಾನು ಕಾಂಗ್ರೆಸ್‍ನ ವ್ಯಕ್ತಿ. ಪಕ್ಷ ನನ್ನ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತದೆ. ಸಂಕಷ್ಟದ ಸಮಯದಲ್ಲಿ ನನ್ನ ಜೊತೆಗೆ ಪಕ್ಷ ಇತ್ತು. ಈಗಲೂ ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಇದನ್ನು ಓದಿ: 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭ: ಸಚಿವ ಮಧು ಬಂಗಾರಪ್ಪ
ಇಂದು ಸಂವಿಧಾನದ ದಿನಾಚರಣೆ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ತಾವು ಮತ್ತೆ ದೆಹಲಿಗೆ ತೆರಳುತ್ತಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು.
ರಾಜ್ಯ ರಾಜಕೀಯದ ಊಹಾಪೋಹಗಳ ಬಗ್ಗೆ ಚರ್ಚೆ ಮಾಡಲು ನಾನು ಬಯಸುವುದಿಲ್ಲ. ಯಾವ ಶಾಸಕರ ಜೊತೆಗೂ ನಾನು ಮಾತನಾಡಿಲ್ಲ, ನನ್ನ ಪರವಾಗಿ ಮಾತನಾಡಿ ಎಂದು ಕೂಡ ಕೇಳಿಲ್ಲ. ನನಗೆ ಪಕ್ಷ ಮುಖ್ಯ. ನನಗಾಗಿ ನನ್ನ ಹೈಕಮಾಂಡ್ ಇದೆ. ಸೂಕ್ತ ಸಮಯದಲ್ಲಿ ಸಮರ್ಪಕ ನಿರ್ಧಾರ ತೆಗೆದುಕೊಳ್ಳುತ್ತದೆ. ಇಲ್ಲಿ ನಾನು ಮುಖ್ಯಮಂತ್ರಿಯಾಗುವುದು ಮುಖ್ಯ ಅಲ್ಲ. ಶಾಸಕರು ನನ್ನ ಪರವಾಗಿ ಮಾತನಾಡುವುದು ಬೇಡ ಎಂದು ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…