ರಾಜ್ಯ

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಡಿಕೆಶಿ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ. ಬೇರೆಯವರಿಗೆ ಅವಕಾಶ ಕೊಡಲಿ. ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ಹಾಗಂತ ಡಿಕೆಶಿ ಸಿಎಂ ಆಗುತ್ತಾರೆ ಎಂದು ಹೇಳುತ್ತಿಲ್ಲ. ಅದೇನು ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಎಂದು ಪ್ರಶ್ನೆ ಮಾಡಿದರು. ನನಗೆ ಅಧಿಕಾರ ದಾಹ ಇಲ್ಲ. ಶಿವಕುಮಾರ್‌ ಸಿಎಂ ಆದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ. ನನ್ನ ಹೇಳಿಕೆಗೆ ನಾನು ಬದ್ಧ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೂವರು ಕನ್ನಡಿಗರು ಸೇರಿದಂತೆ 45 ಮಂದಿಗೆ ಪದ್ಮಶ್ರೀ ಗೌರವ

ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…

7 mins ago

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

2 hours ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

3 hours ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

3 hours ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

4 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

4 hours ago