ರಾಜ್ಯ

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಮಾ.26ರಂದು ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಿಢೀರನೇ ಚಿನ್ನಸ್ವಾಮಿ ಸ್ಟೇಡಿಯಂನ ಐಪಿಎಲ್‌ ಪಂದ್ಯ ಶಾಸಕರಿಗೆ ಟಿಕೆಟ್‌ ಹಂಚಿಕೆ ಹಾಗೂ ಶಾಸಕರ ಮರ್ಯಾದೆಯ ಕುರಿತು ಚರ್ಚೆಗಳು ಪ್ರಾರಂಭವಾದದ್ದು ತಮಗೆ ತಿಳಿದೇ ಇದೆ.

ಕಳೆದ ವರ್ಷ ಇದೇ ಐಪಿಎಲ್‌ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್‌ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಟರನ್ನಾಗಿಸುತ್ತದೆ.

ಈ ಹಿನ್ನೆಲೆಯಲ್ಲಿ ಹಾಗೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರ ಅಥವಾ ಕೆಎಸ್‌ಸಿಎ ವತಿಯಿಂದ ಶಾಸಕರಿಗೆ ನೀಡಲಾಗುವ ಐಪಿಎಲ್‌ ಪಂದ್ಯದ ಯಾವುದೇ ಪಾಸ್‌ ಅಥವಾ ಟಿಕೆಟ್‌ಗಳನ್ನು ನಾನು ಸವಿನಯವಾಗಿ ನಿರಾಕರಿಸಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

1 hour ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

1 hour ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago