ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.
ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ ಕಟ್ಟಡ ನಿರ್ಮಾಣ ಆಗಲಿದೆ ಎಂದರು.
ಇದನ್ನು ಓದಿ: ಎಸ್‌ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ
ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.
ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.
ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…