Mysore
18
overcast clouds

Social Media

ಭಾನುವಾರ, 25 ಜನವರಿ 2026
Light
Dark

ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ: ಡಿ.ಕೆ.ಸುರೇಶ್‌

ಬೆಂಗಳೂರು: ನನ್ನ ಅಣ್ಣ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂಬ ಮಾತನ್ನು ನಾನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂಬ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ನಾವು ಅದರ ಬಗ್ಗೆ ಮಾತನಾಡಲ್ಲ. ಏನೇನಾಗುತ್ತದೆ ಎನ್ನುವುದನ್ನು ಕಾದು ನೋಡಬೇಕು. ಪಕ್ಷದ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಇನ್ನು ಬಿಹಾರ ಚುನಾವಣೆ ಫಲಿತಾಂಶದಲ್ಲಿ ಮಹಾಘಟಬಂಧನ್‌ಗೆ ಹೀನಾಯ ಸೋಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು-ಗೆಲುವು ಎರಡೂ ಇರುತ್ತದೆ. ಬಿಹಾರದಲ್ಲಿ ನಮ್ಮ ರಾಜ್ಯದಂತೆ ಅಲ್ಲಿಯೂ ಗ್ಯಾರಂಟಿ ಅನುಷ್ಠಾನ ಮಾಡಿದ್ದರು. ಈ ಕಾರಣದಿಂದ ಮಹಿಳಾ ಮತದಾರರು ಎನ್‌ಡಿಎ ಪರ ಒಲವು ತೋರಿದ್ದಾರೆ. ಜನರ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Tags:
error: Content is protected !!