ಬೆಂಗಳೂರು: ನನ್ನ ಅಣ್ಣ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂಬ ಮಾತನ್ನು ನಾನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂಬ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವು ಅದರ ಬಗ್ಗೆ ಮಾತನಾಡಲ್ಲ. ಏನೇನಾಗುತ್ತದೆ ಎನ್ನುವುದನ್ನು ಕಾದು ನೋಡಬೇಕು. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.
ಇನ್ನು ಬಿಹಾರ ಚುನಾವಣೆ ಫಲಿತಾಂಶದಲ್ಲಿ ಮಹಾಘಟಬಂಧನ್‌ಗೆ ಹೀನಾಯ ಸೋಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು-ಗೆಲುವು ಎರಡೂ ಇರುತ್ತದೆ. ಬಿಹಾರದಲ್ಲಿ ನಮ್ಮ ರಾಜ್ಯದಂತೆ ಅಲ್ಲಿಯೂ ಗ್ಯಾರಂಟಿ ಅನುಷ್ಠಾನ ಮಾಡಿದ್ದರು. ಈ ಕಾರಣದಿಂದ ಮಹಿಳಾ ಮತದಾರರು ಎನ್‌ಡಿಎ ಪರ ಒಲವು ತೋರಿದ್ದಾರೆ. ಜನರ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…