ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ
ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಸೆ.11) ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ
ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಿಎಸ್ ಐ ಹಗರಣ- ಎಸ್ ಐಟಿ ಕ್ರಮಕ್ಕೆ ಸೂಚನೆ
ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಕಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…