ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ನಾನಾಗೆ ಟಿಕೆಟ್ ಕೇಳಿಲ್ಲ. ಒಂದು ವೇಳೆ ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಗೋಷಣೆ ಮಾಡಿದರೆ ಅದಕ್ಕೆ ಬದ್ಧನಾಗಿದ್ದೇನೆ. ಇಲ್ಲವಾದರೆ ಪಕ್ಷ ಯಾರನ್ನು ಅಭ್ಯರ್ಥಿ ಮಾಡುತ್ತದೊ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡುವುದು ನಮ್ಮ ಜವಬ್ಧಾರಿ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದರು.
ಇಂದಿಗೂ ನನ್ನ ಮಾತಿಗೆ ಬದ್ಧ: ಭಾರತ ಹಿಂದು ರಾಷ್ಟ್ರವಾದರೆ ದೇಶಕ್ಕೆ ಉಳಿಗಾಲವಿಲ್ಲ ಎಂಬ ನನ್ನ ಹೇಳಿಕೆಗೆ ಇಂದಿಗೂಬದ್ಧನಾಗಿದ್ದೇನೆ. ನಾನು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಸರ್ಕಾರ ಧರ್ಮದ ಕೆಲಸ ಮಾಡುವುದಲ್ಲ. ಸರ್ಕಾರ ಮಾಡಬೇಕಾಗಿರುವುದು ಅಭಿವೃದ್ಧಿ ಕೆಲಸ. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಕೇವಲ ಧರ್ಮದ ಕೆಲಸ ಮಾಡುತ್ತಿದೆ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆ ಇದೆ.
ಟಾರ್ಗೆಟ್ ಮಾಡಲು ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ?
ನನ್ನ ತಂದೆ ಯಾವತ್ತೂ ಟಾರ್ಗೆಟ್ ರಾಜಕಾರಣ ಮಾಡಿಲ್ಲ. ಅಷ್ಟಾಗಿಯೂ ಟಾರ್ಗೆಟ್ ಮಾಡಲು ಪ್ರತಾಪ್ ಸಿಂಹ ಏನು ನ್ಯಾಷನಲ್ ಲೀಡರಾ? ಪ್ರತಾಪ್ ಸಿಂಹ ತಾವು ನ್ಯಾಷನಲ್ ಲೀಡರ್ ಎಂಬ ಭ್ರಮೆಯಲಿದ್ದಾರೆ. ಪ್ರತಾಸಿಂಹ ಅವರ ತಮ್ಮ ತಪ್ಪು ಮಾಡಿದ್ದಾರೆ ಹೀಗಾಗಿ ಬಂಧಿಸಿದ್ದಾರೆ. ತಮ್ಮನ ತಪ್ಪು ಮುಚ್ಚಿಕೊಳ್ಳಲು ಸಂಸದರು ಹೀಗೆಲ್ಲಾ ಮಾತನಾಡುತ್ತಿದ್ದಾರೆ.
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…