ರಾಜ್ಯ

ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ ; ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ : ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ. ಆದರೆ ನನ್ನ ಹೆಸರಿನವರಿಗೆ ಆಗಿದೆ ಎಂಬ ವದಂತಿಗಳಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನನಗೆ ಹನಿಟ್ರ್ಯಾಪ್‍ನ ಯಾವುದೇ ಅನುಭವವಾಗಿಲ್ಲ ಎಂದರು.

ಹನಿಟ್ರ್ಯಾಪ್ ಎಂಬುದು ಸಾರ್ವಜನಿಕರ ಜೀವನದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ರಾಜಕೀಯದಲ್ಲೂ ಇದೆ. ಸಣ್ಣಪುಟ್ಟ ವ್ಯಾಪಾರ ಮಾಡುವವರು ಇದಕ್ಕೆ ಸಿಲುಕಿ, ಮರ್ಯಾದೆಗೆ ಅಂಜಿ ಆತಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ಬೆಳಕಿಗೆ ಬಂದಿವೆ, ಇನ್ನೂ ಕೆಲವು ಮುಚ್ಚಿ ಹೋಗಿವೆ.

ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಕೆಲವರು ಹೈಕೋರ್ಟ್‍ಗೆ ಹೋಗಿ ನಿರ್ಬಂಧಕ ಆಜ್ಞೆ ತಂದಿದ್ದರು. ಆಗೆಲ್ಲಾ ಅವರು ಸಿಬಿಐ ತನಿಖೆಗೆ ಒಪ್ಪಿಸುತ್ತಿರಲಿಲ್ಲ. ವಿಧಾನಸಭೆಯಲ್ಲಿ ಪ್ರಸ್ತಾಪವಾದಾಗ ನಮ್ಮ ಸಚಿವರು ತನಿಖೆ ಮಾಡಿಸುವ ಭರವಸೆ ನೀಡಿದ್ದರು. ಆದರೆ ಬಿಜೆಪಿಯವರು ಮುಖ್ಯಮಂತ್ರಿಯವರ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ. ಅಲ್ಲಿನ ಆರ್ಥಿಕ ಸ್ಥಿತಿ ಏನು ಎಂಬೆಲ್ಲಾ ವಿಚಾರಗಳ ಬಗ್ಗೆ ವಿವರಣೆ ನೀಡುತ್ತಿದ್ದರು. ಅದು ಸಾರ್ವಜನಿಕರಿಗೆ ತಿಳಿಯಬಾರದು ಎಂಬ ಕಾರಣಕ್ಕಾಗಿ ಬಿಜೆಪಿಯವರು ವಿಧಾನಮಂಡಲದಲ್ಲಿ ಗದ್ದಲ ಎಬ್ಬಿಸಿ ಅಡ್ಡಿಪಡಿಸಿದ್ದಾರೆ ಎಂದು ದೂರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

23 mins ago

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

36 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

1 hour ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

1 hour ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

1 hour ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 hours ago