ಬೆಂಗಳೂರು: ಕೇತಗಾನಹಳ್ಳಿ ಜಮೀನಿನಲ್ಲಿ ಒಂದೇ ಒಂದು ಇಂಚು ಬೇರೆಯವರ ಜಾಗಕ್ಕೆ ಬೇಲಿ ಹಾಕಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕೇತನಗಾನಹಳ್ಳಿ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮೀನು ದಾಖಲಾತಿಗಳನ್ನು ಕಲೆಹಾಕಿ, ಎಲ್ಲವನ್ನೂ ಪರಿಶೀಲನೆ ಮಾಡಿದ್ದೇನೆ. ತಂದೆಯವರು 46 ಎಕರೆ ಜಮೀನನ್ನು ರೈತರಿಂದ ಖರೀದಿ ಮಾಡಿದ್ದಾರೆ ಎಂದರು.
ಆಗ ಪೋಡಿ ಆಗದ ಜಮೀನು ತೆಗೆದುಕೊಳ್ಳಲು ಅವಕಾಶ ಇತ್ತು. ಪೋಡಿ ದುರಸ್ತಿ ಮಾಡುವುದಕ್ಕೆ ಅದನ್ನು ಸರಿಮಾಡಬೇಕಿರುವುದು ಸರ್ಕಾರ. ನಾವು ಅರ್ಜಿ ಕೊಟ್ಟರೂ ಸರ್ಕಾರ ಅದನ್ನು ಮಾಡಿಲ್ಲ ಎಂದು ಕಿಡಿಕಾರಿದರು.
ನಾವು ಅರ್ಧ ಇಂಚು ಬೇರೆಯವರ ಜಮೀನಿಗೆ ಬೇಲಿ ಹಾಕಿಲ್ಲ. ಡಿಸಿ ಅವರು 14 ಎಕರೆ ಜಮೀನು ಒತ್ತುವರಿ ಆಗಿದೆ ಎನ್ನುತ್ತಿದ್ದಾರೆ. ಯಾವ 14 ಎಕರೆ ಒತ್ತುವರಿ ಆಗಿದೆ ಎಂಬುದನ್ನು ಬಂದು ನೋಡಲಿ ಎಂದರು.





