ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರ ಮತ್ತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್‌ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಟೀಕೆ ಮಾಡಿದರು.
ಇನ್ನು ರಾಜ್ಯದ ಹಲವೆಡೆ ಮೈಕ್ರೋ ಫೈನಾನ್ಸ್‌ನಿಂದ ಕಿರುಕುಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸೂಚನೆ ನೀಡಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…