ಬೆಂಗಳೂರು: ನನಗೂ ವಿನಯ್ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್ ಸೋಮಯ್ಯ ಯಾರೆಂದು ನನಗೆ ಗೊತ್ತೇ ಇಲ್ಲ ಎಂದರು.
ಇನ್ನು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ನನ್ನ ಬಗ್ಗೆ ಮಾತನಾಡಲು ಯಾವುದೇ ವಿಚಾರ ಇಲ್ಲ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಾಗುತ್ತಿದ್ದು, ಇದನ್ನು ಸಹಿಸದೇ ನಿರಂತರ ಅಪಪ್ರಚಾರ ಮಾಡುತ್ತಿದ್ದಾರೆ.
ನನ್ನ ವಿರುದ್ಧ ಯಾವುದೇ ಟೀಕೆ ಬಂದರೂ ನಾನು ದೂರು ನೀಡಿಲ್ಲ. ದೂರು ನೀಡುವಂತೆ ಯಾರಿಗೂ ಹೇಳಿಯೂ ಇಲ್ಲ ಎಂದು ಬಿಜೆಪಿ ನಾಯಕರ ಆರೋಪವನ್ನು ತಳ್ಳಿ ಹಾಕಿದರು.