ರಾಜ್ಯ

ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ: ಶಾಸಕ ಎ.ಎಸ್.ಪೊನ್ನಣ್ಣ

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್‌ ಸೋಮಯ್ಯ ಯಾರೆಂದು ನನಗೆ ಗೊತ್ತೇ ಇಲ್ಲ ಎಂದರು.

ಇನ್ನು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ನನ್ನ ಬಗ್ಗೆ ಮಾತನಾಡಲು ಯಾವುದೇ ವಿಚಾರ ಇಲ್ಲ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಾಗುತ್ತಿದ್ದು, ಇದನ್ನು ಸಹಿಸದೇ ನಿರಂತರ ಅಪಪ್ರಚಾರ ಮಾಡುತ್ತಿದ್ದಾರೆ.

ನನ್ನ ವಿರುದ್ಧ ಯಾವುದೇ ಟೀಕೆ ಬಂದರೂ ನಾನು ದೂರು ನೀಡಿಲ್ಲ. ದೂರು ನೀಡುವಂತೆ ಯಾರಿಗೂ ಹೇಳಿಯೂ ಇಲ್ಲ ಎಂದು ಬಿಜೆಪಿ ನಾಯಕರ ಆರೋಪವನ್ನು ತಳ್ಳಿ ಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

31 mins ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

35 mins ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

4 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

4 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

4 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

5 hours ago